ದೇವಾಂಗ ಜನಾಂಗದಲ್ಲಿ ಮೊಟ್ಟ ಮೊದಲು ಪ್ರಸಿದ್ಧವಾದವರು ದೇವರ ದಾಸಿಮಯ್ಯ.
ಸೀರೆ ನೇಯುವ ಕೆಲಸದಿಂದ ಜೀವನ ಸಾಗಿಸುತ್ತಿದ್ದ ಇವರು ರಾಮನಾಥ ಎನ್ನುವ ನಾಮಂಕಿತವನ್ನು ಕೊಟ್ಟು ಅನೇಕ ವಚನಗಳನ್ನು ರಚಿಸಿದ್ದಾರೆ.
ತುಂಬಾ ಉಪಯುಕ್ತ ಮತ್ತು ತಮ್ಮ ದಿನನಿತ್ಯದ ಜೀವನಕ್ಕೆ ಸಂಭಂದಿಸಿದ ವಿಷಯಗಳ ಬಗ್ಗೆಯೆ ರಚಿಸಿದ ದೇವರ ದಾಸಿಮಯ್ಯ ಅವರ ವಚನಗಳು ತುಂಬಾ ಸರಳವಾಗಿ ಮನೆಸೂರೆಗೊಳ್ಳುತ್ತವೆ.
ಇವರು ದೇವಾಂಗ/ ದೇವ ಬ್ರಾಹ್ಮಣ ದವರಿಗೆ ಕುಲಗುರುವಾಗಿರುತ್ತಾರೆ, ಇದನ್ನು ಈಗಿನ ಎಲ್ಲಾ ದೇವಾಂಗ ಜನಾಂಗದವರು ತಮ್ಮ ಪೀಳಿಗೆಗಳಿಗೆ ತಿಳಿಸಿ ಹೇಳಬೇಕು. ಅವರ ಬಗ್ಗೆ ತಿಳಿಸಕೊಡಬೇಕು.
ಅನೇಕ ಪವಾಡಗಳನ್ನು ಮಾಡಿದ ಇವರು, ಪವಾಡವೊಂದೆ ಅಲ್ಲ, ಮನುಷ್ಯನ/ನಮ್ಮ ಜೀವನದಲ್ಲಿ ದೇವರ ಸ್ಮರಣೆಯೂ ಹಾಗೂ ಜೀವನದಲ್ಲಿ ಸಾಧನೆಯೂ ಅಷ್ಟೇ ಪ್ರಮುಖವೆಂದು ನಂಬಿ ಭಕ್ತಿ ಸಾಧನೆಯಲ್ಲಿಯೇ ಬಹಳ ಹೆಸರನ್ನು ಪಡೆದವರು, ಒಂದು ರೀತಿಯಲ್ಲಿ ಎಲ್ಲರಿಗೂ ಶಿಕ್ಷಕರಾಗಿದ್ದರು. ಅನೇಕ ಮಹಾನ್ ವ್ಯಕ್ತಿಗಳನ್ನು ತಮ್ಮ ಭಕ್ತಿಯ ವಾದದಿಂದ ಸೋಲಿಸಿ, ಆಗಿನ ಕಾಲದಲ್ಲಿಯೇ ಪ್ರಸಿದ್ಧಿ ಪಡೆದು ಹೆಸರಾದವರು. ಶಿವನ ದರ್ಶನದಿಂದ ವರವನ್ನು ಪಡೆದ ಇವರು ಸರಳ, ಸಜ್ಜನಿಕೆಯ ಸ್ವಭಾವದವರಾಗಿದ್ದು, ಎಲ್ಲರಲ್ಲಿಯೂ ಭಕ್ತಿಯ ಸಿಂಚನವನ್ನು ಸಿಂಪಡಿಸಿದರು. ಇವರ ಪತ್ನಿ ದುಗ್ಗಳೆಯೂ ಸಹ ಸತಿ ಶಿರೋಮಣಿಯಾಗಿ ಮಹಾ ಪ್ರತಿವ್ರತೆಯಾಗಿದ್ದು ತಮ್ಮ ಗಂಡನ ಜೊತೆಯಲ್ಲಿ ಆಕೆ ಕೂಡ ಭಕ್ತಿಯಲ್ಲಿ,ಸಂಸಾರದಲ್ಲಿ ಹೆಸರು ಮಾಡಿದವರು. ಇವರುಗಳ ಬಗ್ಗೆ ಹೆಚ್ಚಿಗೆ ಎಲ್ಲೂ ಪ್ರಚಾರಗಳಾಗಲಿ, ಪುಸ್ತಕಗಳಾಗಲಿ ಜಾಸ್ತಿ ಪ್ರಚಲಿತದಲ್ಲಿ ಇಲ್ಲದಿರುವುದೇ ನಮ್ಮ ದುರಾದೃಷ್ಠ. ಆಗಾಗಿ ಹೆಚ್ಚು ಬೆಳ
ಕಿಗೆ ಬರಲಿಲ್ಲ, ಇವರ ಬಗ್ಗೆ ತಿಳಿದುಕೊಳ್ಳಲು. ಮುಂದಾದರು ಇಂತಹ ಮಹಾಸಾಧ್ವಿಗಳು ನಮ್ಮ ನಾಡಲ್ಲಿ ಇದ್ದರು ಎನ್ನುವುದಕ್ಕೆ ಕುರುಹುಗಳನ್ನು ಉಳಿಸುವುದು ನಮ್ಮ ಕರ್ತವ್ಯವಾಗಿದೆ. ಇತಿಹಾಸದಲ್ಲಿ,ಪುರಾಣದಲ್ಲಿ ಇವರ ಬಗ್ಗೆ ತಿಳಿಯಲು ಎಲ್ಲರು ಶ್ರಮಿಸಬೇಕು. ದೇವರ ದಾಸಿಮಯ್ಯನವರು ಶತ-ಶತಮಾನಗಳಿಂದ ಬಂದಂತಹ ದಕ್ಷಿಣ ಭಾರತದಲ್ಲಿ ಹೆಸರಾದ ಪ್ರಸಿದ್ಧ ಶರಣರಿಗಿಂತಲೂ, ಮೊದಲು ಬಂದಂತಹ ಮೊಟ್ಟ ಮೊದಲ ವಚನಕಾರರಾಗಿದ್ದಾರೆ. ಇವರೇ ವಚನಗಳಿಗೆ ತಳಹದಿ ನೀಡಿದವರು. ವಚನಗಳನ್ನು ತಮ್ಮ ಸಾಮಾಜಿಕ ಜೀವನದಲ್ಲಿಯೇ ಕಂಡುಕೊಂಡು ರಚಿಸಿದರು.
ಸೀರೆ ನೇಯುತ್ತಾ ತಮ್ಮ ಪ್ರಾಪಂಚಿಕ ಜೀವನದಲ್ಲಿ ಸಂಸಾರ ಸಾಗಿಸುತ್ತಾ, ಭಕ್ತಿ ಮಾರ್ಗವೇ ಉನ್ನತ ಎಂದು ಸಾರಿದವರು.